Select Page

Date: May 24, 2023

ದಿನಾಂಕ 24/5/2023 ಬುಧವಾರ ಬೆಳಿಗ್ಗೆ 10 ಗಂಟೆಗೆ ವಿಶ್ವ ಸ್ಕಿಜೋಪ್ರೇನಿಯ ದಿನಾಚರಣೆಯ ಅಂಗವಾಗಿ ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್ ಎ ಬಾಳಿಗ ಸಭಾಂಗಣದಲ್ಲಿ ಡಾ.ವಿ ಬಾಳಿಗ ಸ್ಮಾರಕ ಆಸ್ಪತ್ರೆ ದೊಡ್ಡಣಗುಡ್ಡೆ, ಕಮಲ್ ಎ ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಇದರ ಜಂಟಿ ಆಶ್ರಯದಲ್ಲಿ ಏರ್ಪಡಿಸಿದ್ದ ಮಾಹಿತಿ ಕಾರ್ಯಗಾರವನ್ನು ಶ್ರೀಮತಿ ಅಮಿತ ಪೈ ,ಸಂಸ್ಥಾಪಕರು ಒನ್ ಗುಡ್ ಸ್ಟೆಪ್ ,ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವರ್ಷದ ಧ್ಯೇಯ ವಾಕ್ಯ “Rebuilding a better mental health system together” ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ ಪಿ ವಿ ಭಂಡಾರಿ ,ವೈದ್ಯಕೀಯ ನಿರ್ದೇಶಕರು ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ದೊಡ್ಡನಗುಡ್ಡೆ ಇವರು ವಹಿಸಿದ್ದರು. ವೇದಿಕೆಯಲ್ಲಿ ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯರಾಗಿರುವ ಡಾ ದೀಪಕ್ ಮಲ್ಯ, ಡಾ ಮಾನಸ್ ಈ ಆರ್ ಹಾಗೂ ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿಣಿ ಯಾಗಿರುವ ಶ್ರೀಮತಿ ಸೌಜನ್ಯ ಶೆಟ್ಟಿ ಇವರು ಉಪಸ್ಥಿತರಿದ್ದರು . ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಆಪ್ತಸಮಲೋಚಕಿಯಾಗಿರುವ ಕುಮಾರಿ ಭಾಗ್ಯಶ್ರೀ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.ಡಿವೈನ್ ಇನ್ಸ್ಟಿಟ್ಯೂಷನ್ ನ ನರ್ಸಿಂಗ್ ವಿದ್ಯಾರ್ಥಿಗಳು ಮಾಹಿತಿ ಕಾರ್ಯಗಾರದ ಪ್ರಯೋಜನವನ್ನು ಪಡೆದರು.